ADVERTISEMENT

ಸರ್ಕಾರದ ಯೋಜನೆ ಕುರಿತು ಸಫಾಯಿ ಕರ್ಮಚಾರಿಗಳಿಗೆ ಜಾಗೃತಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 12:39 IST
Last Updated 18 ಮಾರ್ಚ್ 2020, 12:39 IST
ಬೆಳಗಾವಿಯ ವಿಟಿಯುನಲ್ಲಿ ಈಚೆಗೆ ನಡೆದ ಸಫಾಯಿ ಕರ್ಮಚಾರಿಗಳ ಕಾರ್ಯಾಗಾರದಲ್ಲಿ ಕುಲಸಚಿವ ಡಾ.ಎ.ಎಸ್. ದೇಶಪಾಂಡೆ ಮಾತನಾಡಿದರು
ಬೆಳಗಾವಿಯ ವಿಟಿಯುನಲ್ಲಿ ಈಚೆಗೆ ನಡೆದ ಸಫಾಯಿ ಕರ್ಮಚಾರಿಗಳ ಕಾರ್ಯಾಗಾರದಲ್ಲಿ ಕುಲಸಚಿವ ಡಾ.ಎ.ಎಸ್. ದೇಶಪಾಂಡೆ ಮಾತನಾಡಿದರು   

ಬೆಳಗಾವಿ: ಜಿಲ್ಲಾ ಪಂಚಾಯಿತಿ, ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಲಭ್ಯವಿರುವ ಯೋಜನೆಗಳ ಕುರಿತು ತಿಳಿಸುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರ ಈಚೆಗೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಡಾ.ಎ.ಎಸ್. ದೇಶಪಾಂಡೆ, ‘ಪೌರಕಾರ್ಮಿಕರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಕುರಿಹೊಳಿ, ನಗರಪಾಲಿಕೆ ಪರಿಸರ ಎಂಜಿನಿಯರ್‌ ಪ್ರವೀಣಕುಮಾರ್, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಚೆನ್ನನವರ, ಮೌಲ್ಯಮಾಪನ ಕುಲಸಚಿವ ಡಾ.ಸತೀಶ ಅಣ್ಣೀಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ವೈದ್ಯಾಧಿಕಾರಿ ಡಾ.ಮಹೇಶ ಸತ್ತೀಗೇರಿ, ಡಾ.ಪ್ರಲ್ಹಾದ ರಾಠೋಡ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.