
ಬೆಳಗಾವಿ: ದೇಹದಾನ ಜಾಗೃತಿಗಾಗಿ ತಂದೆಯ ಮೃತದೇಹ ಛೇದನ ಮಾಡಿ ವೈದ್ಯಕೀಯ ಇತಿಹಾಸ ಸೃಷ್ಟಿಸಿದ ಕೆಎಲ್ಇ ಬಿ.ಎಂ.ಕಂಕಣವಾಡಿ ಆಯುರ್ವೆದ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಮುಖ್ಯಸ್ಥ, ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್‌ನ ಕಾರ್ಯದರ್ಶಿ ಡಾ.ಮಹಾಂತೇಶ ಬಿ. ರಾಮಣ್ಣವರ ಅವರು ‘ಆಯುರ್ವೇದ ವಿಶ್ವರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಜೆ ಆಯುರ್ವೇದಿಕ್ ಫೌಂಡೇಷನ್ ವತಿಯಿಂದ ಎರಡನೇ ವಿಶ್ವ ಆಯುರ್ವೇದ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.25ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ದೇಶ ಹಾಗೂ ವಿದೇಶಗಳಿಂದ 400 ಆಯುರ್ವೇದ ವೈದ್ಯರಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ಅದರಲ್ಲಿ ಡಾ.ರಾಮಣ್ಣವರ ಕೂಡ ಒಬ್ಬರು. ದೇಹದಾನದ ಬಗ್ಗೆ ನಿರಂತರ ಜಾಗೃತಿ, ಅರಿವು ಮೂಡಿಸಿದ ಅವರ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವಿಶ್ವ ಆಯುರ್ವೇದ ಸಮ್ಮೇಳನದ ಆಯೋಜಕರಾದ ಡಾ.ಗಿರಿಧರ್ ಕಜೆ, ಕಾಲೇಜಿನ ಪ್ರಾಂಶುಪಾಲ ಡಾ.ಸುಹಾಸ ಕುಮಾರ ಶೆಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.