ADVERTISEMENT

ಬಿಜೆಪಿಯವರಿಗೆ ಬಿಎಸ್‌ವೈ ವಿರೋಧ ಪಕ್ಷವಾಗಿದ್ದಾರೆ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 10:17 IST
Last Updated 12 ಅಕ್ಟೋಬರ್ 2021, 10:17 IST

ಬೆಳಗಾವಿ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯವರಿಗೆ ವಿರೋಧ ಪಕ್ಷವಾಗಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ಲೇಷಿಸಿದರು.

ಯಡಿಯೂರಪ್ಪ ಆಪ್ತ ಆಯುನೂರು ಉಮೇಶ್‌ ಮನೆ ಮೇಲೆ ಐಟಿ ದಾಳಿ ನಡೆದ ವಿಚಾರವಾಗಿ ಇಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಯಡಿಯೂರಪ್ಪ ಅವರು ಬಿಜೆಪಿಗೆ ವಿರೋಧ ಪಕ್ಷದಂತೆ ಎನಿಸಿದ್ದಾರೆ. ಆ ಪಕ್ಷದಲ್ಲಿನ ಆಂತರಿಕ ಸಮಸ್ಯೆ ಇದಕ್ಕೆ ಕಾರಣ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ’ ಎಂದರು.

ಗೋಕಾಕ ಶಾಸಕ ರಮೇಶ ಜಾರಕಿಹೊಳ ಆಪ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾದ ಕುರಿತು ಪ್ರತಿಕ್ರಿಯಿಸಿದ ಅವರು, ‘ರಮೇಶ ಅವರಿಗೆ ಯಾರು ಏನು ಸಂದೇಶ ಕೊಟ್ಟಿದ್ದಾರೆಯೋ ನನಗೆ ಗೊತ್ತಿಲ್ಲ. ಈ ಬಗ್ಗೆ ಖುದ್ದು ಅವರೆ ಸ್ಪಷ್ಟ ಉತ್ತರ ಕೊಡಬೇಕು; ನನ್ನ ಬಳಿ ಉತ್ತರ ಇಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.