ADVERTISEMENT

ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ, ಬಿಜೆಪಿಯನ್ನು ಗೆಲ್ಲಿಸಿ: ಶ್ರೀರಾಮುಲು ಮನವಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 16:45 IST
Last Updated 25 ಸೆಪ್ಟೆಂಬರ್ 2021, 16:45 IST
ಬಿ.ಶ್ರೀರಾಮುಲು
ಬಿ.ಶ್ರೀರಾಮುಲು   

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದ್ದೇವೆ. ಬಿಜೆಪಿಯನ್ನು 150 ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಸಾರಿಗೆ ಸಚಿವಬಿ.ಶ್ರೀರಾಮುಲು ಜನರಲ್ಲಿ ಮನವಿ ಮಾಡಿದರು.

ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದಲ್ಲಿ ₹4 ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ಹಾಗೂ ಎಸ್.ಎಫ್.ಸಿ. ₹ 3.50 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಪುರಸಭೆ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಅಭಿವೃದ್ಧಿಯ ಕಲ್ಪನೆಯನ್ನು ಸಣ್ಣ ಪಟ್ಟಣ ಹಾಗೂ ಗ್ರಾಮಗಳ ಕಡೆಗೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಬಣ್ಣಿಸಿದರು.

ರಾಜ್ಯದ ನಾಗರಿಕರು ಸರ್ಕಾರಿ ಬಸ್‌ಗಳಲ್ಲಿ ಸುರಕ್ಷಿತ ಹಾಗೂ ನೆಮ್ಮದಿಯಿಂದ ಪ್ರಯಾಣ ಕೈಗೊಳ್ಳಲು ಎಲ್ಲ ಅಗತ್ಯ ವ್ಯವಸ್ಥೆ ಕಲ್ಪಿಸಲು ಬದ್ಧವಾಗಿದ್ದೇವೆ ಎಂದು ಹೇಳಿದರು.

ಕೇಂದ್ರ‌‌ ಹಾಗೂ ರಾಜ್ಯ ಸರ್ಕಾರಗಳಿಂದ ಅಭಿವೃದ್ಧಿ ಕೆಲಸಗಳು ಡಬಲ್ ಎಂಜಿನ್ ‌ಗಾಡಿಯಂತೆ ನಾಗಾಲೋಟದಲ್ಲಿ ಸಾಗಿವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.