ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಶಿರೂರ ಗ್ರಾಮ ಸಮೀಪದ ಮಾರ್ಕಂಡೇಯ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಕೊನೆ ಕ್ಷಣದಲ್ಲಿ ಭಾನುವಾರ ಮುಂದೂಡಲಾಯಿತು.
ಪೂಜೆಗೆ ಎಲ್ಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮುಂದೂಡಲಾಗಿದೆ ಎಂದು ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದರು.
ತಮ್ಮ ಆಪ್ತ ಎಸ್.ಎ. ಕೋತ್ವಾಲ್ ನಿಧನದ ಕಾರಣದಿಂದ ಸಚಿವರು ಪ್ರವಾಸ ರದ್ದುಗೊಳಿಸಿದರು ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.