ಬೈಲಹೊಂಗಲ: ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಫಕೀರವ್ವ ಕಾಕಿ (36) ಕೊಲೆಯಾದ ಮಹಿಳೆ. ಪತಿ ಯಲ್ಲಪ್ಪ ಕಾಕಿ ಕೊಲೆ ಆರೋಪಿ. ಕಂಠಪೂರ್ತಿ ಕುಡಿದು ಬಂದಿದ್ದ ಪತಿ ಪತ್ನಿಯು ಮಲಗಿದ್ದಾಗ ಸಲಾಕೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದಾನೆ. ಕೊಲೆಯಾದ ಮಹಿಳೆಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
ಘಟನಾ ಸ್ಥಳಕ್ಕೆ ನೇಸರಗಿ ಪೋಲಿಸ್ ಠಾಣೆ ಸಿಪಿಐ ರಾಘವೇಂದ್ರ ಹವಾಲ್ದಾರ, ಪಿಎಸ್‌ಐ ಸಿದ್ದಪ್ಪ ಯಡಳ್ಳಿ ಭೇಟಿ ನೀಡಿ ತನಿಖೆ ನಡೆಸಿದರು. ನೇಸರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.