ಬೆಳಗಾವಿ: ‘ಸವದತ್ತಿಯ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷ ಜ.28ರಂದು ನಡೆಯುತ್ತಿದ್ದ ಬನದ ಹುಣ್ಣಿಮೆ ಜಾತ್ರೆಯನ್ನು ಈ ಬಾರಿ ಕೋವಿಡ್–19 ಕಾರಣದಿಂದ ರದ್ದುಪಡಿಸಲಾಗಿದೆ’ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.
‘ಭಕ್ತರ ಆರೋಗ್ಯ ಕಾಪಾಡುವ ಉದ್ದೇಶದಿಂದ ಜ.31ರವರೆಗೆ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನಿಷೇಧಿಸಲಾಗಿದೆ. ಭಕ್ತರು ಜ.22ರಿಂದ ಫೆ.9ರವರೆಗೆ ಬನದ ಹುಣ್ಣಿಮೆ ಜಾತ್ರೆಯ ಪೂಜಾ ವಿಧಿವಿಧಾನಗಳನ್ನು ಮನೆಯಲ್ಲಿಯೇ ಆಚರಿಸಬೇಕು. ದೇವಸ್ಥಾನಕ್ಕೆ ಬರಬಾರದು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.