ADVERTISEMENT

ಬೆಳಗಾವಿ: ಬಸ್ ಸಂಚಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 9:09 IST
Last Updated 28 ಸೆಪ್ಟೆಂಬರ್ 2020, 9:09 IST
ಬೆಳಗಾವಿಯಲ್ಲಿ ಪ್ರತಿಭಟನೆ
ಬೆಳಗಾವಿಯಲ್ಲಿ ಪ್ರತಿಭಟನೆ   
""

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು.

ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು.

ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು.

ADVERTISEMENT

'ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಯಾವ ಮಾರ್ಗದ ಬಸ್ ಬಹುತೇಕ ತುಂಬುತ್ತದೆಯೋ ಅದನ್ನು ಕಳುಹಿಸಲಾಗುತ್ತಿದೆ' ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ 'ಪ್ರಜಾವಾಣಿ'ಗೆ ತಿಳಿಸಿದರು.

ಮಾನವ ಸರಪಳಿ ರಚಿಸಿ ಪ್ರತಿಭಟನೆ

ಬೆಳಗಾವಿಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಹತ್ತಿರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕರ್ನಾಟಕ ಬಂದ್ ಬೆಂಬಲಿಸಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾನವ ಸರಪಳಿ ರಚಿಸಿ ಪ್ರತಿಭಟನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.