ADVERTISEMENT

ಬೆಳಗಾವಿ: ಸಡಗರದ ಬಸವ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 3 ಮೇ 2022, 5:44 IST
Last Updated 3 ಮೇ 2022, 5:44 IST
ಬೆಳಗಾವಿ: ಸಡಗರದ ಬಸವ ಜಯಂತಿ ಆಚರಣೆ
ಬೆಳಗಾವಿ: ಸಡಗರದ ಬಸವ ಜಯಂತಿ ಆಚರಣೆ   

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಜಗಜ್ಯೋತಿ ಬಸವೇಶ್ವರ ಜಯಂತಿ ‌ಆಚರಣೆ ಕಾರ್ಯಕ್ರಮಗಳಿಗೆ ಮಂಗಳವಾರ ಚಾಲನೆ ದೊರೆತಿದೆ.

ಜಿಲ್ಲಾಡಳಿತ, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ, ಬಸವೇಶ್ವರ ಜಯಂತ್ಯುತ್ಸವ ಆಚರಣೆ ಸಮಿತಿ ಹಾಗೂ ವಿವಿಧ ಲಿಂಗಾಯತ ಸಂಘಟನೆಗಳ ಸಹಯೋಗದಲ್ಲಿ ನಗರದ ಗೋವಾವೇಸ್ ಸಮೀಪದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಿತು.

ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಮಹಾನಗರಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷೆ ಜ್ಯೋತಿ ಭಾವಿಕಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

ADVERTISEMENT

ನಗರದ ವಿವಿಧ ಗಲ್ಲಿಗಳಲ್ಲಿ ಬಸವೇಶ್ವರ ಫೋಟೊ, ಪ್ರತಿಮೆ ಹಾಗೂ ಪುತ್ಥಳಿಗಳಿಗೆ ಪೂಜಾ ಕಾರ್ಯಕ್ರಮ ನಡೆಯಿತು. ಸಂಜೆ ಮೆರವಣಿಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.