ADVERTISEMENT

ಬೆಳಗಾವಿಯಲ್ಲಿ ಬಸವ ಜಯಂತಿ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 5:50 IST
Last Updated 26 ಏಪ್ರಿಲ್ 2020, 5:50 IST
ಬಸವೇಶ್ವರ ಉದ್ಯಾನದಲ್ಲಿ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಬಸವೇಶ್ವರ ಉದ್ಯಾನದಲ್ಲಿ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.   

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಇಲ್ಲಿನ ಗೋವಾವೇಸ್ ನಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿ ಇರುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.

ADVERTISEMENT

ಶಾಸಕ ಅನಿಲ್ ಬೆನಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ‌.ಎಚ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಲಿಂಗಾಯತ ಸಮಾಜದ ಮುಖಂಡರಾದ ರಮೇಶ್ ಕಳಸಣ್ಣವರ, ರತ್ನಪ್ರಭಾ ಬೆಲ್ಲದ, ಜ್ಯೋತಿ ಭಾವಿಕಟ್ಟಿ, ಸೋಮಲಿಂಗ ಮಾವಿನಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.