ADVERTISEMENT

ಸರಜೂ ಕಾಟ್ಕರ್‌ಗೆ ಬಸವರಾಜ ಕಟ್ಟೀಮನಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 14:05 IST
Last Updated 23 ಸೆಪ್ಟೆಂಬರ್ 2020, 14:05 IST
ಸರಜೂ ಕಾಟ್ಕರ್‌
ಸರಜೂ ಕಾಟ್ಕರ್‌   

ಬೆಳಗಾವಿ: ಪತ್ರಕರ್ತ, ಕವಿ ಹಾಗೂ ಲೇಖಕ ಸರಜೂ ಕಾಟ್ಕರ್ ಅವರನ್ನು ಬಸವರಾಜ ಕಟ್ಟೀಮನಿ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ ತಿಳಿಸಿದ್ದಾರೆ.

‘ಅವರು ‘ನೇತಾಜಿ’ ದಿನಪತ್ರಿಕೆ, ‘ಸಂಯುಕ್ತ ಕರ್ನಾಟಕ’ದಲ್ಲಿ ಕೆಲ ವರ್ಷ, ಬಳಿಕ ‘ಕನ್ನಡಪ್ರಭ’, ‘ಇಂಡಿಯನ್ ಎಕ್ಸ್‌ಪ್ರೆಸ್‌’ ಪತ್ರಿಕೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ‘ಸಾಕ್ಷಿ ಹೇಳಲಾಗದ ಕಥೆಗಳು’, ‘ವೃತ್ತಾಂತ’ ಎಂಬ ಪತ್ರಿಕಾ ಬದುಕಿನ ಅನುಭವ ಆಧರಿಸಿದ ಕೃತಿಗಳನ್ನು ರಚಿಸಿದ್ದಾರೆ. ಕಾವ್ಯ, ಕಥೆ, ಕಾದಂಬರಿ, ಅನುವಾದ ನಾಟಕ ವಿಮರ್ಶೆ ಕುರಿತು 60ಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಅವರ ಅಂಕಣ ಬರಹಗಳು ಮತ್ತು ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದಾರೆ. 45 ವರ್ಷಗಳ ಸುದೀರ್ಘ ಅನುಭವ ಮತ್ತು ಸಾಧನೆ ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT