ADVERTISEMENT

ಹೊಸದಾಗಿ ಕೆಪಿಎಸ್‌ ಆರಂಭಿಸುವುದಿಲ್ಲ: ಸಚಿವ ನಾಗೇಶ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 12:32 IST
Last Updated 17 ಸೆಪ್ಟೆಂಬರ್ 2022, 12:32 IST
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ   

ಬೆಳಗಾವಿ: ‘ರಾಜ್ಯದಲ್ಲಿ ಇರುವ ಕರ್ನಾಟಕ ಪಬ್ಲಿಕ್‌ ಶಾಲೆ(ಕೆಪಿಎಸ್‌)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್‌ ಹಾಗೂ ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಈಗ 276 ಕೆಪಿಎಸ್‌ಗಳಿವೆ. ಮತ್ತೆ ಕೆ‍ಪಿಎಸ್‌ ಹಾಗೂ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿದರೆ, ಭಾಷಾ ಶಿಕ್ಷಕರ ಕೊರತೆ ಎದುರಾಗುತ್ತದೆ. ಅಂತಹ ಪ್ರಯತ್ನಕ್ಕೆ ಮಂದಾಗುವುದಿಲ್ಲ. ಶೀಘ್ರ ಆಂಗ್ಲ ಮಾಧ್ಯಮ ಶಿಕ್ಷಕರ ನೇಮಕಾತಿ ನಡೆಸುತ್ತೇವೆ’ ಎಂದರು.

‘ಅಂಗನವಾಡಿ ಕೇಂದ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯೊಂದಿಗೆ ವಿಲೀನಗೊಳಿಸುತ್ತಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

‘ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಶಾಲಾ ಅವಧಿಯಲ್ಲಿ ತರಗತಿಗೆ ಗೈರಾಗಿ, ಖಾಸಗಿ ಕಾರ್ಯಕ್ರಮಕ್ಕೆ ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.