ADVERTISEMENT

ಪಕ್ಷಾತೀತವಾಗಿ ಬಿಡಿಸಿಸಿ ಬ್ಯಾಂಕ್ ಚುನಾವಣೆ: ಬಾಲಚಂದ್ರ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 3:21 IST
Last Updated 7 ಆಗಸ್ಟ್ 2025, 3:21 IST
೬ಎಂಕೆಎಚ್೧(ಎ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸೌಹಾರ್ದಯುತ ಸಭೆ ಉದ್ಘಾಟಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ.
೬ಎಂಕೆಎಚ್೧(ಎ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸೌಹಾರ್ದಯುತ ಸಭೆ ಉದ್ಘಾಟಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ.   

ಎಂ.ಕೆ.ಹುಬ್ಬಳ್ಳಿ: ಬಿಡಿಸಿಸಿ ಬ್ಯಾಂಕ್ ರೈತರಿಗೆ ಸಾಕಷ್ಟು ಸಾಲಸೌಲಭ್ಯಗಳನ್ನು ಒದಗಿಸುತ್ತಿದೆ. ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡಿ ನೆರವಾಗುತ್ತಿದೆ. ಮುಂದೆ  ಬಿಜೆಪಿ ಸರ್ಕಾರ ಬಂದಾಗ ಸಾಲ ಮನ್ನಾ ಆದರೆ, ರೈತರಿಗೆ  ಅನುಕೂಲ. ಹಾಗಾಗಿ ರೈತರು ಪ್ರಾಥಮಿಕ ಸಹಕಾರಿ ಸಂಘಗಳ ಮೂಲಕ ಹೆಚ್ಚು ಸಾಲ ಪಡೆದುಕೊಳ್ಳಬೇಕು ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಬೈಲಹೊಂಗಲ ತಾಲ್ಲೂಕಿನ ಗದ್ದಿಕರವಿನಕೊಪ್ಪ ಸಮೀಪದ ಶ್ರೀ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸೌಹಾರ್ದಯುತ ಸಭೆ ಉದ್ಘಾಟಿಸಿ ಮಾತನಾಡಿದರು.

ಮೂವತ್ತು ವರ್ಷಗಳಿಂದ ಬೈಲಹೊಂಗಲ ಮತ್ತು ಕಿತ್ತೂರು ಅಖಂಡ ತಾಲ್ಲೂಕಿನ ಬಿಡಿಸಿಸಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಮಾಜಿ ಶಾಸಕ ಮಹಾಂತೇಶ ದೊಡಗೌಡರ ಅವರು, ಸಹಕಾರಿ ಸಂಘಗಳನ್ನು ಸದೃಢಗೊಳಿಸಿದ್ದಾರೆ. ಬೈಲಹೊಂಗಲದಿಂದ ಕಿತ್ತೂರು ತಾಲ್ಲೂಕು ವಿಭಜನೆಯಿಂದ ಈಗ ಹೊಸದಾಗಿ ಮತ್ತೊಂದು ನಿರ್ದೇಶಕ ಸ್ಥಾನವಿದೆ. ಅಲ್ಲಿ ನಮ್ಮ ಸಮಿತಿ ಅಭ್ಯರ್ಥಿಯನ್ನಾಗಿ ಮಾಜಿ ಸಚಿವ ದಿ. ಖ.ಬಿ.ಇನಾಮದಾರ ಪುತ್ರ ವಿಕ್ರಮ ಇನಾಮದಾರ ಅವರನ್ನು ಅಭ್ಯರ್ಥಿಯನ್ನಾಗಿಸಿದ್ದೇವೆ. ಬೈಲಹೊಂಗಲದಿಂದ ಮಹಾಂತೇಶ ದೊಡಗೌಡರ ಅಭ್ಯರ್ಥಿಯಾಗಿದ್ದಾರೆ. ಇಬ್ಬರನ್ನೂ ಎರಡು ತಾಲ್ಲೂಕಿನ ಎಲ್ಲ ಪ್ರಾಥಮಿಕ ಸಹಕಾರಿ ಸಂಘಗಳ ಪದಾಧಿಕಾರಿಗಳು ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ADVERTISEMENT

ಪ್ರಭಾಕರ್ ಕೋರೆ, ಸಚಿವ ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಸೇರಿ ಎಲ್ಲ ಪಕ್ಷದ ಪ್ರಮುಖರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಪಕ್ಷಾತೀತವಾಗಿ ಮಾಡುತ್ತಿದ್ದೇವೆ. ಈಗಾಗಲೇ 13 ತಾಲ್ಲೂಕುಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಯರಗಟ್ಟಿ, ಹುಕ್ಕೇರಿ ತಾಲೂಕಿನ ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿಯಿದೆ. ಅವಿರೋಧ ಆಯ್ಕೆಗೆ ಒಮ್ಮತ ವ್ಯಕ್ತವಾಗದ ತಾಲ್ಲೂಕಿನಲ್ಲಿ ಅನಿವಾರ್ಯವಾದರೆ ಚುನಾವಣೆ ನಡೆಸುತ್ತೇವೆ ಎಂದರು.

ಮಾಜಿ ಶಾಸಕ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಂತೇಶ ದೊಡಗೌಡರ ಮಾತನಾಡಿ, ತಮ್ಮನ್ನು, ವಿಕ್ರಮ ಇನಾಮದಾರ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.

ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಣ್ಣಾಸಾಹೇಬ ಜೊಲ್ಲೆ, ಚಿದಾನಂದ ಸವದಿ, ವಿಕ್ರಮ ಇನಾಮದಾರ, ಮಾಜಿ ಶಾಸಕ ಜಗದೀಶ ಮೆಟಗುಡ ಮಾತನಾಡಿದರು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗೋಡೆ, ರಾಜೇಂದ್ರ ಅಂಕಲಗಿ, ಅರವಿಂದ ಪಾಟೀಲ, ವಿರೂಪಾಕ್ಷ ಮಾಮನಿ, ಡಾ. ಬಸವರಾಜ ಪರವಣ್ಣವರ, ಶಂಕರ ಮಾಡಲಗಿ, ಚನ್ನಬಸಪ್ಪ ಮೊಕಾಶಿ, ವಿಜಯ ಮೆಟಗುಡ, ಪ್ರಕಾಶ ಮೂಗಬಸವ, ಸುನೀಲ ಮುರಕುಂಬಿ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು, ಪ್ರಾಥಮಿಕ ಸಹಕಾರಿ ಸಂಘಗಳ ಪದಾಧಿಕಾರಿಗಳು, ರೈತರು ಇದ್ದರು.

೬ಎಂಕೆಎಚ್೧ ಬೈಲಹೊಂಗಲ ಮತ್ತು ಕಿತ್ತೂರು ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸೌಹಾರ್ದಯುತ ಸಭೆಯನ್ನು ಗಣ್ಯರು ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.