ಖಾನಾಪುರ: ತಾಲ್ಲೂಕಿನ ಕಣಕುಂಬಿ ಅರಣ್ಯ ವಲಯದ ಹುಳಂದ ಗ್ರಾಮದ ಹೊರವಲಯದಲ್ಲಿ ಭಾನುವಾರ ಕೃಷಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ.
ಹುಳಂದ ಗ್ರಾಮದ ರೈತ ವಾಸುದೇವ ನಾರಾಯಣ ಗಾವಡೆ ಎಂಬುವರು ಕರಡಿ ದಾಳಿಯಿಂದ ಗಾಯಗೊಂಡ ರೈತ.
ವಾಸುದೇವ ಅವರ ಮೇಲೆ ದಾಳಿ ನಡೆಸಿದ ಕರಡಿ ಅವರ ಹೊಟ್ಟೆ, ಮುಖಕ್ಕೆ ಪರಚಿ ಗಾಯಗೊಳಿಸಿದೆ. ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ನಿತ್ರಾಣರಾಗಿದ್ದ ಅವರನ್ನು ಸ್ಥಳೀಯರ ನೆರವಿನೊಂದಿಗೆ ಆಂಬುಲೆನ್ಸ್ ಮೂಲಕ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಎಂದು ಕಾಂಗ್ರೆಸ್ ಮುಖಂಡ ಸುರೇಶ ಜಾಧವ ಮಾಹಿತಿ ನೀಡಿದ್ದಾರೆ.
ಜಿಲ್ಲಾಸ್ಪತ್ರೆಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಭೇಟಿ ನೀಡಿದರು. ಕಣಕುಂಬಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.