ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ
ಕಾಗವಾಡ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಐನಾಪುರ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.
ರಾಯಬಾಗ ತಾಲ್ಲೂಕಿನ ಕುಡಚಿಯಿಂದ ಹೈದರಾಬಾದ್ ಕಡೆಗೆ ಮಾಂಸ ಸಾಗಿಸುತ್ತಿದ್ದ ವಾಹನ, ಐನಾಪುರ ದಾಟುತ್ತಿತ್ತು. ಅದರಲ್ಲಿ ಗೋಮಾಂಸ ಸಾಗಿಸುತ್ತಿದ್ದಾಗಿ ಶಂಕಿಸಿ, ಕೆಲವು ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಕಾರ್ಯಕರ್ತರು ಯಾವ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರು ಬರುವಷ್ಟರಲ್ಲಿ ವಾಹನ ಸುಟ್ಟು ಕರಕಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್ಪಿ ಡಾ.ಭೀಮಾಶಂಕರ ಗುಳೇದ, 'ಈ ಘಟನೆಗೆ ಸಂಬಂಧಿಸಿ ಎರಡು ಪ್ರಕರಣ ದಾಖಲಿಸಿದ್ದೇವೆ. ಗೋಹತ್ಯೆ ಕಾಯ್ದೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಮೂರು ಜನರನ್ನು ಬಂಧಿಸಿದ್ದೇವೆ. ಕಲಬುರಗಿಯಲ್ಲಿ ಈಗ ಮುಖ್ಯ ಆರೋಪಿ ಬಂಧನವಾಗಿದೆ. ಲಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದ್ದು, ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.