
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ಇಲ್ಲಿನ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಂಗಳವಾರ ಲಾರಿ ಹರಿದು ಭಿಕ್ಷುಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ, ಅವರ ಗುರುತು ಪತ್ತೆಯಾಗಿಲ್ಲ.
ಟ್ರಾಫಿಕ್ ಸಿಗ್ನಲ್ ಬಿದ್ದಿದ್ದರಿಂದ ಲಾರಿ ನಿಂತಿತ್ತು. ವಾಹನ ಸಂಚಾರಕ್ಕೆ ಅವಕಾಶ ಸಿಗುತ್ತಿದ್ದಂತೆ ಅದು ಮುಂದೆ ಸಾಗಿತು. ಆಗ ಅಲ್ಲಿಯೇ ಭಿಕ್ಷೆ ಬೇಡುತ್ತಿದ್ದ ವೃದ್ಧರೊಬ್ಬರು ಲಾರಿಯ ಮುಂದಿನ ಚಕ್ರದಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಅವರ ಗುರುತು ಪತ್ತೆಹಚ್ಚಲು ಪ್ರಯತ್ನಿಸುತ್ತಿರುವುದಾಗಿ ಸಂಚಾರ ಉತ್ತರ ಠಾಣೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಅಪಘಾತದ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.