ADVERTISEMENT

ಬೆಳಗಾವಿ| ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 910 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 10:03 IST
Last Updated 31 ಮಾರ್ಚ್ 2023, 10:03 IST

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 271 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 910 ವಿದ್ಯಾರ್ಥಿಗಳು ಗೈರು ಹಾಜರಾದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 32,346 ವಿದ್ಯಾರ್ಥಿಗಳ ಪೈಕಿ 31,810 ವಿದ್ಯಾರ್ಥಿಗಳು ಹಾಜರಾದರು. 536 ಮಂದಿ ಗೈರು ಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 43,525 ವಿದ್ಯಾರ್ಥಿಗಳ ಪೈಕಿ 43,151 ವಿದ್ಯಾರ್ಥಿಗಳು ಹಾಜರಾದರು. 374 ವಿದ್ಯಾರ್ಥಿಗಳು ಗೈರು ಹಾಜರಾದರು.

ADVERTISEMENT

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾರ್ಗಸೂಚಿ ಅನ್ವಯ, ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.