ADVERTISEMENT

ಬೆಳಗಾವಿ | ಕಾರಿನ ಮೇಲೆ‌ ಬಿದ್ದ ಲಾರಿ: ಇಬ್ಬರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2025, 5:47 IST
Last Updated 15 ಮಾರ್ಚ್ 2025, 5:47 IST
<div class="paragraphs"><p>ಕಾರಿನ ಮೇಲೆ‌ ಬಿದ್ದ ಲಾರಿ</p></div>

ಕಾರಿನ ಮೇಲೆ‌ ಬಿದ್ದ ಲಾರಿ

   

ಬೆಳಗಾವಿ: ಇಲ್ಲಿ‌ನ ಕೆಎಲ್ಇ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.‌ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಲುಕಿಕೊಂಡ ಇಬ್ಬರನ್ನೂ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.

ADVERTISEMENT

ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ‌ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿತು.

ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಲು ಹರಸಾಹಸ ನಡೆಸಿದರು.

ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.