ADVERTISEMENT

ಮತ್ತೆ 38 ಮಂದಿಗೆ ಕೋವಿಡ್–19 ದೃಢ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 13:22 IST
Last Updated 7 ಜೂನ್ 2020, 13:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 38 ಮಂದಿಗೆ ಕೋವಿಡ್–19 ಸೋಂಕು ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 295ಕ್ಕೆ ಏರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಜಿಲ್ಲೆಯ ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ವಾಪಸಾದವರೇ ಆಗಿದ್ದಾರೆ. ಇವರಲ್ಲಿ 6, 7, 4, 9, 5, 12 ವರ್ಷದ ಮಕ್ಕಳಿದ್ದಾರೆ.

‘ಕ್ವಾರಂಟೈನ್‌ ಕೇಂದ್ರದಿಂದ ಮನೆಗೆ ಹೋಗಿದ್ದ ಕೆಲವರಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ, ಅವರ ‍ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

‘ಬೆನಕಟ್ಟಿ ಗ್ರಾಮದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಆದರೆ, ಅವರ ಸಂಪರ್ಕಕ್ಕೆ ಬಂದವರು ಹೋಂ ಕ್ವಾರಂಟೈನ್‌ನಲ್ಲಿ ಇರದೆ ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ಆತಂಕ ಉಂಟಾಗಿದೆ’ ಎಂದು ಸ್ಥಳೀಯರು ದೂರಿದರು.

‘ಭಾನುವಾರ ಸೋಂಕು ದೃಢಪಟ್ಟಿರುವವರೆಲ್ಲರೂ ಜಿಲ್ಲೆಯ ವಿವಿಧ ಕ್ವಾರಂಟೈನ್‌ ಕೇಂದ್ರಗಳಲ್ಲಿ ಇದ್ದವರಾಗಿದ್ದಾರೆ. ಸೋಂಕು ದೃಢವಾಗುತ್ತಿದ್ದಂತೆಯೇ ಅವರನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್. ತುಕ್ಕಾರ ‘ಪ್ರಜಾವಾಣಿ’ಗೆ ತಿಳಿಸಿದರು.

ಶನಿವಾರ ಗುಜರಾತ್‌ನಿಂದ ಬಂದ ಇಬ್ಬರು ಹಾಗೂ ಮಹಾರಾಷ್ಟ್ರದಿಂದ ವಾಪಸಾದ ಮೂವರಿಗೆ ಸೋಂಕು ದೃಢಪಟ್ಟಿತ್ತು ಮತ್ತು ಗುಣಮುಖವಾದ 27 ಮಂದಿಯನ್ನು ಬಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.