ADVERTISEMENT

ಬೆಳಗಾವಿ ವಿಮಾನ ನಿಲ್ದಾಣ | ಸೇನಾಧಿಕಾರಿ ಬ್ಯಾಗ್‌ನಲ್ಲಿ ಜೀವಂತ ಗುಂಡು ಪತ್ತೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 15:47 IST
Last Updated 7 ಜನವರಿ 2024, 15:47 IST
<div class="paragraphs"><p>ಬೆಳಗಾವಿ ವಿಮಾನ ನಿಲ್ದಾಣ</p></div>

ಬೆಳಗಾವಿ ವಿಮಾನ ನಿಲ್ದಾಣ

   

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ಪರಿಶೀಲಿಸುವಾಗ, ಸೇನಾಧಿಕಾರಿ ಬ್ಯಾಗ್‌ನಲ್ಲಿ ಜೀವಂತ ಗುಂಡು ಪತ್ತೆಯಾಗಿದೆ.

‘ಸೇನೆಯಲ್ಲಿ ಕ್ಯಾಪ್ಟನ್‌ ಆಗಿರುವ ಅಧಿಕಾರಿ ಮರಾಠಿ ಲಘುಪದಾತಿ ದಳದಲ್ಲಿ ತರಬೇತಿ ಪೂರ್ಣಗೊಳಿಸಿ, ಬೆಳಗಾವಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದರು. ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ ಜೀವಂತ ಗುಂಡು ಸಿಕ್ಕಿದೆ. ನಂತರ ನಾವು ವಶಕ್ಕೆ ಪಡೆದು ವಿಚಾರಣೆ ನಡೆಸಿದೆವು. ಜೀವಂತ ಗುಂಡು ಇರುವುದನ್ನು ಗಮನಿಸದೆ ತಾವು ಪ್ರಯಾಣಿಸುತ್ತಿದ್ದಾಗಿ ತಿಳಿಸಿದ್ದಾರೆ’ ಎಂದು ಮಾರಿಹಾಳ ಠಾಣೆ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.