ADVERTISEMENT

ಬೆಳಗಾವಿ | ವಿಮಾನ ಸಂಪರ್ಕ ಕಡಿತ: ಪ್ರತಿಭಟನೆಯ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 8:07 IST
Last Updated 9 ಜನವರಿ 2026, 8:07 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಬೆಳಗಾವಿ: ‘ಬೆಳಗಾವಿ ವಿಮಾನ ನಿಲ್ದಾಣದಿಂದ ಒಂದಾದ ಮೇಲೊಂದರಂತೆ ವಿಮಾನ ಸಂಪರ್ಕ ಕಡಿತಗೊಳ್ಳುತ್ತಿರುವುದು ಸರಿಯಲ್ಲ. ಇದು ಹೀಗೇ ಮುಂದುವರಿದರೆ ಉಗ್ರ ಪ್ರತಿಭಟನೆ ಮಾಡಲಾಗುವುದು’ ಎಂದು ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಎಚ್ಚರಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉದ್ಯಮಗಳ ಮೇಲೆ, ಜನಜೀವನದ ಮೇಲೆ, ಉದ್ಯೋಗಿಗಳ ಮೇಲೆ ಹಾಗೂ ಪ್ರತಿಯೊಂದು ವ್ಯಾಪಾರ ವ್ಯವಹಾರದ ಮೇಲೆ ವಿಮಾನ ಕಡಿತದ ವ್ಯತಿರಿಕ್ತ ಪರಿಣಾಮವಾಗುತ್ತಿದೆ’ ಎಂದರು.

ADVERTISEMENT

‘ಉಡಾನ್ ಯೋಜನೆ ಸ್ಥಗಿತವಾದ ನಂತರ ಬೇರೆ ವಿಮಾನ ನಿಲ್ದಾಣಗಳಿಗೆ ತೊಂದರೆ ಆಗದಿದ್ದರೂ ಬೆಳಗಾವಿಗೆ ಮಾತ್ರ ಬಹಳ ತೊಂದರೆಯಾಗುತ್ತಿದೆ. ಸಂಚಾರ ದಟ್ಟಣೆ ಇದ್ದರೂ ಒಂದಾದ ಮೇಲೊಂದರಂತೆ ವಿಮಾನ ಕಡಿತವಾಗುತ್ತಿರುವುದು ವಿಪರ್ಯಾಸ. ಇದರಿದಾಗಿ ಉದ್ಯಮಿಗಳಿಗೆ, ರಫ್ತುದಾರರಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟವಾಗುತ್ತಿದೆ. ಈ ಕುರಿತು ಈಗಾಗಲೇ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಮುಂಬೈ, ಚೆನ್ನೈ, ನವದೆಹಲಿ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಸಂಪರ್ಕ ಅತ್ಯಗತ್ಯವಾಗಿದೆ. ಸದ್ಯದಲ್ಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಪರಿಸ್ಥಿತಿ ವಿವರಿಸಲಾಗುವುದು. ಪರಿಹಾರ ಸಿಗದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಹೇಳಿದರು.

ಫೌಂಡ್ರಿ ಕ್ಲಸ್ಟರ್ ಅಧ್ಯಕ್ಷ ರಾಮ್ ಭಂಡಾರೆ, ಲಘು ಉದ್ಯೋಗ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಸಚಿನ್ ಸಬ್ನಿಸ್, ವಾಣಿಜ್ಯೋದ್ಯಮ ಸಂಘದ ಗೌರವ ಕಾರ್ಯದರ್ಶಿ ಸತೀಶ ಕುಲಕರ್ಣಿ, ಲಘು ಉದ್ಯೋಗ ಭಾರತೀಯ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಇನಾಮದಾರ, ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಅಜಯ ಪೈ, ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ನಿತಿನ್ ಲಾಂಡಗೆ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಮಸ್ಯೆಗಳನ್ನು ಅನಾವರಣ ಮಾಡಿದರು.

ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳು, ಆಡಳಿತ ಮಂಡಳಿಯ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.