ADVERTISEMENT

ಬಸವ ಜಯಂತಿ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 12:44 IST
Last Updated 26 ಏಪ್ರಿಲ್ 2020, 12:44 IST
ಬೆಳಗಾವಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು
ಬೆಳಗಾವಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು   

ಬೆಳಗಾವಿ: ಜಿಲ್ಲಾಡಳಿತದ ವತಿಯಿಂದ ಇಲ್ಲಿನ ಗೋವಾವೇಸ್ ವೃತ್ತದಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಆರೋಗ್ಯ ಕಾಪಾಡಿಕೊಳ್ಳುವ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿ ಇರುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಶಾಸಕ ಅನಿಲ ಬೆನಕೆ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಮುಖಂಡರಾದ ಲಿಂಗಾಯತ ರಮೇಶ ಕಳಸಣ್ಣವರ, ಜ್ಯೋತಿ ಭಾವಿಕಟ್ಟಿ, ಸೋಮಲಿಂಗ ಮಾವಿನಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.