
ಬೆಳಗಾವಿಯ ಕೇದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯರಿಬ್ಬರು ಕಳವು ಮಾಡಿದ ಚಿನ್ನಾಭರಣಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಗುರುವಾರ ಪ್ರದರ್ಶಿಸಿದರು
ಬೆಳಗಾವಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಮಾರ್ಕೆಟ್ ಪೊಲೀಸರು, ₹11.25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ವಡ್ಡರವಾಡಿ ಮೂಲದ ಆರತಿ ಅಲಿಯಾಸ್ ಪರೀದಾ ಚೌಗುಲೆ (26) ಮತ್ತು ಸರಸ್ವತಿ ರೋಖಡೆ (45) ಬಂಧಿತರು. 2024ರಲ್ಲಿ ಇವರು ನಾಲ್ಕು ಬಾರಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತನಿಖಾ ತಂಡದ ನೇತೃತ್ವ ವಹಿಸಿದ್ದ ಮಾರ್ಕೆಟ್ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ತಿಳಿಸಿದ್ದಾರೆ.
ಬಂಧಿತ ಮಹಿಳೆಯರು ಕದ್ದ ಚಿನ್ನಾಭರಣಗಳನ್ನು ಆರತಿ ಎನ್ನುವವರ ಪತಿ ಶಿವಾ ಚೌಗುಲೆ ಎಂಬಾತನಿಗೆ ನೀಡುತ್ತಿದ್ದರು. ಈತ ಆಭರಣಗಳನ್ನು ಕರಗಿಸಿ ಬೆಳಗಾವಿಯ ಖಾಸಗಿ ಫೈನಾನ್ಸ್ ಒಂದರಲ್ಲಿ ಅಡವಿಟ್ಟು ಹಣ ಪಡೆದಿದ್ದ. ಪೊಲೀಸರು ಫೈನಾನ್ಸ್‌ನಿಂದ 176 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಮುಖ ಆರೋಪಿ ಶಿವಾ ಚೌಗುಲೆಗಾಗಿ ಹುಡುಕಾಟ ಮುಂದುವರಿದಿದೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.