ADVERTISEMENT

ಬೆಳಗಾವಿ: 10.26 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 15:17 IST
Last Updated 6 ಅಕ್ಟೋಬರ್ 2025, 15:17 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಳಗಾವಿ: ‘ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲು 11.85 ಲಕ್ಷ ಕುಟುಂಬ ಗುರುತಿಸಲಾಗಿತ್ತು. ಈ ಪೈಕಿ ಸೋಮವಾರ ಸಂಜೆ 7ರವರೆಗೆ 10.26 ಲಕ್ಷ ಕುಟುಂಬಗಳ(ಶೇ 86) ಸಮೀಕ್ಷೆ ಪೂರ್ಣಗೊಂಡಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್‌.ಹರ್ಷ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸಮೀಕ್ಷೆ ಮುಕ್ತಾಯದ ಹಂತ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಮುಗಿಯುವ ನಿರೀಕ್ಷೆ ಇದೆ’ ಎಂದರು.

ADVERTISEMENT

‘ದಸರಾ ರಜೆ ಮುಗಿದ ಹಿನ್ನೆಲೆಯಲ್ಲಿ ಅ.8ರಂದು ಶಾಲೆಗಳ ತರಗತಿ ಮರುಆರಂಭವಾಗಲಿವೆ. ಅ.8ರಿಂದ 12ರವರೆಗೆ ನಿತ್ಯ ಬೆಳಿಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ ಶಾಲೆಗಳಲ್ಲಿ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು. ಸಮೀಕ್ಷೆಗೆ ನಿಯೋಜನೆಗೊಂಡವರು ನಂತರದ ಅವಧಿಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚಿಸಲಾಗಿದೆ’ ಎಂದು ಡಿಡಿಪಿಐ ಲೀಲಾವತಿ ಹಿರೇಮಠ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.