ADVERTISEMENT

ಬೆಳಗಾವಿ | ಪಶು ಆಹಾರವಿದ್ದ ಲಾರಿ ಬೆಂಕಿಗೆ ಆಹುತಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 19:15 IST
Last Updated 15 ಫೆಬ್ರುವರಿ 2026, 19:15 IST
ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿನ ಜಾವ ಲಾರಿಗೆ ಬೆಂಕಿ ಹೊತ್ತಿಕೊಂಡಿತ್ತು
ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿನ ಜಾವ ಲಾರಿಗೆ ಬೆಂಕಿ ಹೊತ್ತಿಕೊಂಡಿತ್ತು   

ಹಿರೇಬಾಗೇವಾಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಶು ಆಹಾರ ಸಾಗಿಸುತ್ತಿದ್ದ ಲಾರಿ ಭಾನುವಾರ ಬೆಳಿಗ್ಗೆ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. 

ಮಹಾರಾಷ್ಟ್ರದ ಸಾಂಗ್ಲಿಯ ಕುಪವಾಡದಿಂದ ಮೈಸೂರಿಗೆ ಪಶು ಆಹಾರ ತುಂಬಿಕೊಂಡು ಹೊರಟಿದ್ದ ಲಾರಿಯ ಟೈರ್‌ಗೆ ಬೆಂಕಿ ಹೊತ್ತಿದ ಪರಿಣಾಮ ಈ ಅವಘಡ ಸಂಭವಿಸಿದೆ. ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದರು. 

ಪಶು ಆಹಾರ ಯಾರಿಗೆ ಸೇರಿದ್ದು, ಎಷ್ಟು ಮೊತ್ತ ಎಂಬ ಮಾಹಿತಿ ಗೊತ್ತಾಗಿಲ್ಲ. ಹಿರೇಬಾಗೇವಾಡಿ ಪೊಲೀಸರು ಸ್ಥಳ ಪರಿಶೀಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.