ADVERTISEMENT

ಪಾಲಿಕೆ: ಮತದಾರರ ಕರಡುಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 11:55 IST
Last Updated 28 ಜೂನ್ 2021, 11:55 IST

ಬೆಳಗಾವಿ: ‘ಮಹಾನಗರ ಪಾಲಿಕೆಯ ವಾರ್ಡ್‌ವಾರು ಕರಡು ಮತದರಾರರ ಪಟ್ಟಿ ಪ್ರಕಟಿಸಲಾಗಿದೆ’ ಎಂದು ಮಹಾನಗರ ‌ಪಾಲಿಕೆ‌ ಆಯುಕ್ತ ಕೆ.ಎಚ್. ಜಗದೀಶ್‌ ತಿಳಿಸಿದ್ದಾರೆ.

‘ಮಹಾನಗರ ಪಾಲಿಕೆಗೆ 2011ರ ಸಾಲಿನ ಜನಗಣತಿ ಆಧರಿಸಿ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ, ಅಂತಿಮ ಅಧಿಸೂಚನೆಯನ್ನು ಏಪ್ರಿಲ್‌ 19ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಡಿ ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆ ಹಾಗೂ ರಾಜ್ಯ ಚುನಾವಣಾ ಆಯೋಗದ ಸೂಚನೆಗಳ‌ ಅನ್ವಯ ಜ.1ರ ಅರ್ಹತಾ ದಿನಾಂಕಕ್ಕೆ ಪರಿಷ್ಕರಣೆಯಾದ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯಂತೆ ಜ.18ರಲ್ಲಿನ ದತ್ತಾಂಶ ಪಡೆದುಕೊಂಡು ಪ್ರಸ್ತುತ ಮತದಾರರ ಪಟ್ಟಿ ಸಿದ್ಧಡಿಸಲಾಗಿದೆ‌’ ಎಂದು ಮಾಹಿತಿ ನೀಡಿದ್ದಾರೆ.

‘ಎಲ್ಲ 58 ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ತಾಲ್ಲೂಕು ಪಂಚಾಯ್ತಿ ಕಚೇರಿ, ಮಹಾನಗರ ಪಾಲಿಕೆಯ ಕಚೇರಿ ಹಾಗೂ ಮತಗಟ್ಟೆ ವ್ಯಾಪ್ತಿಗಳಲ್ಲಿ ಪ್ರಚುರಪಡಿಸಲಾಗಿದೆ. ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಜುಲೈ 1ರ ಒಳಗೆ ಮಹಾನಗರ ಪಾಲಿಕೆಗೆ ಸಲ್ಲಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.