
ಬೆಳಗಾವಿ: ‘ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರ ಬಾಕಿ ಉಳಿದಿರುವ ₹37 ಸಾವಿರ ಕೋಟಿ ಬಿಲ್ ಅನ್ನು ತಕ್ಷಣ ಪಾವತಿಸದಿದ್ದರೆ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಏಪ್ರಿಲ್ ನಂತರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು’ ಎಂದು ರಾಜ್ಯ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು.
‘ರಾಜ್ಯದಲ್ಲಿ ಮೂರು ವರ್ಷಗಳಿಂದ ಯಾವುದೇ ಕಾಮಗಾರಿಯ ಬಿಲ್ ನೀಡಿಲ್ಲ. ಬೆಳಗಾವಿ ಜಿಲ್ಲೆಯಲ್ಲೇ ₹3,458 ಕೋಟಿ ಬಾಕಿಯಿದೆ. ನಾವು ನಮ್ಮ ಆಸ್ತಿಗಳನ್ನು ಅಡವಿಟ್ಟು ಕಾಮಗಾರಿಗಳನ್ನು ಮುಗಿಸಿದ್ದೇವೆ. ಮಾಡಿದ ಕೆಲಸಕ್ಕೆ ಕೂಲಿ ಕೇಳುತ್ತಿದ್ದೇವೆ’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಬಾಕಿ ಬಿಲ್ ನೀಡುವಂತೆ ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪ ಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವರಿಕೆ ಮಾಡಿದ್ದೇವೆ. ಆದರೆ, ಈವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸಭೆಯನ್ನೂ ಕರೆಯುವ ಸೌಜನ್ಯ ತೋರಿಸಿಲ್ಲ’ ಎಂದು ದೂರಿದರು.
ಈ ಹಿಂದಿನ ಸರ್ಕಾರದಂತೆ ಪ್ರಸಕ್ತ ಕಾಂಗ್ರೆಸ್ ಸರ್ಕಾರದಲ್ಲೂ ಬಿಲ್ ಪಾವತಿಗೆ ಕಮಿಷನ್ ನಿಗದಿ ಮಾಡಲಾಗಿದೆ. ವಿಳಂಬಕ್ಕೆ ಇದೂ ಕೂಡ ಕಾರಣಆರ್.ಮಂಜುನಾಥ್ ಅಧ್ಯಕ್ಷ ರಾಜ್ಯ ಕಾರ್ಯನಿರತ ಗುತ್ತಿಗೆದಾರರ ಸಂಘ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.