ಬಿ.ವೈ. ವಿಜಯೇಂದ್ರ
ಬೆಳಗಾವಿ: ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ, ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ ಜವಳಕರ್ ಬಂಧಿಸಿರುವ ಪ್ರಕರಣ ಈಗ ರಾಜಕೀಯ ಬಣ್ಣ ಪಡೆದುಕೊಂಡಿದೆ.
ಅಭಿಜಿತ ಜವಳಕರ್ ಬಂಧನವಾಗುತ್ತಿದ್ದಂತೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಖುದ್ದಾಗಿ ಮಾಹಿತಿ ಪಡೆದಿದ್ದಾರೆ.
ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಅನಿಲ ಬೆನಕೆ ಅವರಿಗೆ ಕರೆ ಮಾಡಿ, ಯಾವ ಕಾರಣಕ್ಕೆ ಬಂಧಿಸಿದ್ದಾರೆ?,
ಪೊಲೀಸರ ಮೇಲೆ ಯಾರು ಒತ್ತಡ ಹೇರಿದ್ದಾರೆ ಎನ್ನುವ ಮಾಹಿತಿ ಪಡೆದಿದ್ದಾರೆ.
ಬೆಳಗ್ಗೆ 10 ಗಂಟೆಗೆ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಲು ಸೂಚಿಸಿದ್ದಾರೆ.
ಅಭಿಜಿತ ಬಿಡುಗಡೆಗೊಳಿಸದಿದ್ದರೆ, ರಾಜ್ಯದಾದ್ಯಂತ ಹೋರಾಟ ಮಾಡಲು ಬಿಜೆಪಿಯವರು ಯೋಜಿಸಿದ್ದಾರೆ.
ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲೂ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.