
ಜೈಲು (ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ಮದುವೆ ಆಗುವುದಾಗಿ ನಂಬಿಸಿ ಬಾಲಕಿಯನ್ನು ಬೈಕಿನಲ್ಲಿ ಅಪಹರಿಸಿ ತನ್ನ ಸಂಬಂಧಿಕರ ಮನೆಯಲ್ಲಿ ಬಚ್ಚಿಟ್ಟು, ಅತ್ಯಾಚಾರ ನಡೆಸಿದ ಅಪರಾಧಿಗೆ ಜಿಲ್ಲಾ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ, ಬುಧವಾರ ತೀರ್ಪು ನೀಡಿದೆ.
ಖಾಸಬಾಗದ ಭಾರತನಗರ ನಿವಾಸಿ ಆನಂದ ಶಿವಾಜಿ ಜಂತಿಕಟ್ಟಿ (25) ಶಿಕ್ಷಗೆ ಗುರಿಯಾದವ. 2021ರ ಆಗಸ್ಟ್ 9ರಂದು ಬಾಲಕಿಯನ್ನು ಅಪಹರಿಸಿದ್ದ. ತನ್ನ ಚಿಕ್ಕಮ್ಮನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಬಗ್ಗೆ ಬಾಲಕಿ ಶಹಾಪುರ ಠಾಣೆಯಲ್ಲಿ ದೂರು ನೀಡಿದ್ದರು.
ಇನ್‌ಸ್ಪೆಕ್ಟರ್‌ಗಳಾದ ಎಚ್.ವೈ.ಕುದ್ರೆಮನಿ ಹಾಗೂ ವಿನಾಯಕ ಬಡಿಗೇರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ ಪುಷ್ಪಲತಾ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ₹1 ಲಕ್ಷ ಪರಿಹಾಣ ಒದಗಿಸಬೇಕು ಎಂದು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.