ADVERTISEMENT

ಆಟೊರಿಕ್ಷಾ ಮೀಟರ್‌ ಅಳವಡಿಕೆ ಕಡ್ಡಾಯ: ಡಿಸಿ ಮೊಹಮ್ಮದ್‌ ರೋಷನ್‌

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 8:26 IST
Last Updated 8 ಜನವರಿ 2026, 8:26 IST
ಬೆಳಗಾವಿಯಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮಾತನಾಡಿದರು
ಬೆಳಗಾವಿಯಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮಾತನಾಡಿದರು   

ಬೆಳಗಾವಿ: ‘ಬೆಳಗಾವಿ ನಗರದ 16 ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸುವ ಆಟೊರಿಕ್ಷಾಗಳಲ್ಲಿ ಎರಡು ತಿಂಗಳೊಳಗೆ ಮೀಟರ್‌ ಅಳವಡಿಸಿಕೊಳ್ಳುವುದು ಕಡ್ಡಾಯ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಇಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಜತೆಗೆ ಬುಧವಾರ ಸಭೆ ನಡೆದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬೆಳಗಾವಿ ನಗರದಲ್ಲಿ ಇರುವ 11 ಸಾವಿರ ಆಟೊರಿಕ್ಷಾಗಳ ಪೈಕಿ 5 ಸಾವಿರ ವಾಹನಗಳಷ್ಟೇ ಕಾರ್ಯ ನಿರ್ವಹಿಸುತ್ತಿವೆ. ಹಲವು ಸುತ್ತಿನ ಸಭೆ ನಡೆಸಿ, ವಾಹನಗಳಲ್ಲಿ ಮೀಟರ್‌ ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಇದಕ್ಕೆ ಸ್ಪಂದಿಸಿ ಈಗಾಗಲೇ ಕೆಲವರು ಅಳವಡಿಕೆ ಮಾಡಿದ್ದಾರೆ’ ಎಂದರು.

ADVERTISEMENT

‘ನಗರದಲ್ಲಿ ಆಟೊರಿಕ್ಷಾಗಳಲ್ಲಿ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಲು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿದ್ದೇವೆ. ಇದಕ್ಕಾಗಿ ಕಾಲಾವಕಾಶ ಕೂಡ ಕೊಟ್ಟಿದ್ದೆವು. ಈಗ ಬಾಕಿ ಉಳಿದ ಪ್ರಕ್ರಿಯೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಈಗ ನಿರ್ದೇಶನ ಕೊಟ್ಟಿದ್ದೇವೆ’ ಎಂದು ತಿಳಿಸಿದರು.

‘ಈ ಬಾರಿ ಮೀಟರ್‌ ಅಳವಡಿಕೆ ಕಡ್ಡಾಯ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತೇವೆ’ ಎಂದರು.

ನಗರ ಪೊಲೀಸ್‌ ಕಮಿಷನರ್‌ ಭೂಷಣ ಬೊರಸೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.