ADVERTISEMENT

ಜಿಲ್ಲಾಧಿಕಾರಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 7:46 IST
Last Updated 21 ಜನವರಿ 2022, 7:46 IST
ಎಂ.ಜಿ. ಹಿರೇಮಠ
ಎಂ.ಜಿ. ಹಿರೇಮಠ   

ಬೆಳಗಾವಿ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಕೋವಿಡ್–19 ಗುರುವಾರ ದೃಢಪಟ್ಟಿದೆ.

‘ಶೀತ ಇದ್ದಿದ್ದರಿಂದ ಅವರು ಪರೀಕ್ಷೆಗೆ ಒಳಗಾಗಿದ್ದರು. ಆರ್‌ಟಿ–ಪಿಸಿಆರ್‌ ಪರೀಕ್ಷೆಯಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಮನೆಯಲ್ಲಿ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ದಿನಗಳವರೆಗೆ ವಿಶ್ರಾಂತಿ ಪಡೆಯಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯನ್ನು ಶುಕ್ರವಾರ ಸ್ಯಾನಿಟೈಸ್ ಮಾಡಲಾಯಿತು. ಅವರ ಸಂಪರ್ಕಕ್ಕೆ ಬಂದಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಲಾಗಿದೆ ಎಂದು ಮೂಗಳು ಮಾಹಿತಿ ನೀಡಿವೆ.

ADVERTISEMENT

ಕೆಲವು ದಿನಗಳ ಹಿಂದೆ ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್‌ ಸೋಂಕಿಗೆ ಒಳಗಾಗಿದ್ದರು. ಅವರು, ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.