ADVERTISEMENT

ಡಿಸಿಸಿ ಬ್ಯಾಂಕ್‌ ಚುನಾವಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 16:47 IST
Last Updated 14 ಜುಲೈ 2020, 16:47 IST

ಬೆಳಗಾವಿ: ಇಲ್ಲಿನ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಯನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಲಾಗಿದೆ.

ಮೇನಲ್ಲಿ ನಿಗದಿಯಾಗಿದ್ದ ಚುನಾವಣೆಯನ್ನು ಕೋವಿಡ್–19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಗಸ್ಟ್‌ಗೆ ಮುಂದೂಡಲಾಗಿತ್ತು. ಚುನಾವಣಾ ಅಧಿಕಾರಿಯನ್ನೂ ನೇಮಿಸಲಾಗಿತ್ತು. ಆಕಾಂಕ್ಷಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಚುನಾವಣೆಗೆ ತೆರೆಮರೆಯಲ್ಲಿ ಬಿರುಸಿನ ಚಟುವಟಿಕೆಗಳನ್ನು ನಡೆಸಿದ್ದರು. ಇದೀಗ, ಡಿಸೆಂಬರ್‌ಗೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT