
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಿಕಟ್ಟಿ ಕ್ರಾಸ್‌ನಿಂದ ಭೀಮಗಡ ಗ್ರಾಮದವರೆಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಚಾಲನೆ ನೀಡಿದರು.
ಸುಮಾರು ₹1.80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯಿಂದ ರೈತರಿಗೆ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಹಾಗೂ ಸಾರ್ವಜನಿಕರ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಂತರ, ಚಂದೂರ ಗ್ರಾಮದಲ್ಲಿ ಸುಮಾರು ₹35 ಲಕ್ಷ ವೆಚ್ಚದಲ್ಲಿ ಪೇವರ್ಸ್ ರಸ್ತೆ ನಿರ್ಮಾಣದ ಕಾಮಗಾರಿಗೆ ಚನ್ನರಾಜ ಭೂಮಿಪೂಜೆ ನೆರವೇರಿಸಿದರು.
ಖಾನಾಪುರ ತಾಲ್ಲೂಕಿನ ವಡೆಬೈಲ್ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರದ ಸಮಾರಂಭದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಚೌಕಟ್ಟು ಪೂಜೆ’ ಹಾಗೂ ಸತ್ಕಾರ ಸಮಾರಂಭದಲ್ಲಿ ಅವರು ಭಾಗವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.