ADVERTISEMENT

100 ಸ್ಕ್ಯಾನಿಂಗ್ ಸೆಂಟರುಗಳ ಮೇಲೆ ದಾಳಿಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 10:14 IST
Last Updated 25 ಜೂನ್ 2022, 10:14 IST

ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣ ಹತ್ಯೆ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾಡಳಿತ ತನಿಖೆ ಚುರುಕುಗೊಳಿಸಿದೆ.

ಇದಕ್ಕಾಗಿ ಐದು ತಂಡಗಳನ್ನು ರಚನೆ ಮಾಡಲಾಗಿದ್ದು, ಶನಿವಾರ ನಗರದ ವಿವಿಧ ಹೆರಿಗೆ ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಸೆಂಟರುಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು.

ಬೆಳಗಾವಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶಿವಾನಂದ ಮಾಸ್ತಿಹೊಳಿ ನೇತೃತ್ವದ ತಂಡ ನಗರದ ವಿವಿಧೆಡೆ ದಿಢೀರ್ ದಾಳಿ ನಡೆಸಿತು.

ADVERTISEMENT

ಸ್ಕ್ಯಾನಿಂಗ್ ಸೆಂಟರ್ ತೆರೆಯಲು ಅನುಮತಿ ಪಡೆಯಲಾಗಿದೆ? ನಿಯಮ ಪಾಲಿಸಲಾಗುತ್ತಿದೆಯೇ, ಜನರಿಗೆ ಕಾಣುವಂತೆ ಭ್ರೂಣಲಿಂಗ ಪತ್ತೆ- ಹತ್ಯೆ ನಿಷೇಧ ಕುರಿತಾದ ಕಾನೂನು ತಿಳಿವಳಿಕೆ ಮೂಡಿಸಲಾಗುತ್ತಿದೆಯೇ ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಆದೇಶದ ಮೇರೆಗೆ,
ಬೆಳಗಾವಿ ತಾಲ್ಲೂಕಿನ 100 ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಲು ತಂಡ ಸಿದ್ಧತೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.