ಬೆಳಗಾವಿ: ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇ– ಮೇಲ್ ಮೂಲಕ ಹುಸಿ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಧ್ಯಾಹ್ನದ ಎಲ್ಲ ಕಲಾಪಗಳನ್ನು ತಕ್ಷಣ ಸ್ಥಗಿತಗೊಳಿಸಲಾಯಿತು.
ನ್ಯಾಯಾಲಯದ ಮೇಲ್‌ಗೆ ಇ–ಮೇಲ್ ಸಂದೇಶ ಬರುತ್ತದ್ದಂತೆಯೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಎಲ್ಲ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು. ಮೂರು ತಾಸು ತಪಾಸಣೆ ಬಳಿಕ ಇದೊಂದು ಹುಸಿ ಬೆದರಿಕೆ ಎಂದು ಖಚಿತಪಡಿಸಿದರು.
‘ನಮ್ಮ ಸಿಬ್ಬಂದಿ ನ್ಯಾಯಾಲಯ ಆವರಣವನ್ನು ಸಂಪೂರ್ಣ ಪರಿಶೀಲನೆ ಮಾಡಿದ್ದಾರೆ. ಈ ರೀತಿ ಹುಸಿ ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸಲಾಗುವುದು’ ಎಂದು ಡಿಸಿಪಿ ನಾರಾಯಣ ಭರಮನಿ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.