ADVERTISEMENT

ಪಶ್ಚಿಮ ಏಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬೆಳಗಾವಿ ಜನರ ನೆರವಿಗೆ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 14:19 IST
Last Updated 1 ಮಾರ್ಚ್ 2026, 14:19 IST
<div class="paragraphs"><p>ತುರ್ತು ಸಹಾಯವಾಣಿ</p></div>

ತುರ್ತು ಸಹಾಯವಾಣಿ

   

ಬೆಳಗಾವಿ: ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬೆಳಗಾವಿ ಜಿಲ್ಲೆಯ ಜನರ ನೆರವಿಗೆ ಧಾವಿಸಲು ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದೆ.

‘ಯುದ್ಧಪೀಡಿತ ಪ್ರದೇಶದಲ್ಲಿ ಬೆಳಗಾವಿ ಜಿಲ್ಲೆಯ ಜನರು ಸಿಲುಕಿರುವುದು ಇನ್ನೂ ಗಮನಕ್ಕೆ ಬಂದಿಲ್ಲ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಸಹಾಯವಾಣಿ ತೆರೆದು, 24x7 ಮಾದರಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಜಿಲ್ಲೆಯ ನಾಗರಿಕರು ಅಥವಾ ಅವರ ಸಂಬಂಧಿಕರು ಸಹಾಯಕ್ಕಾಗಿ ಬೆಳಗಾವಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ(ದೂ.ಸಂ.0831-2407290) ಸಂಪರ್ಕಿಸಬಹುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ.

ADVERTISEMENT

‘​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿ ನೀಡುವ ಸೂಚನೆಗಳನ್ನು ನಾವು ನಿರಂತರವಾಗಿ ಗಮನಿಸುತ್ತಿದ್ದೇವೆ. ಯಾವುದೇ ಸಮಯದಲ್ಲಿ ಕರೆ ಬಂದರೂ ಸ್ಪಂದಿಸಿ, ಸಂಬಂಧಿತರಿಗೆ ಮಾಹಿತಿ ನೀಡುತ್ತೇವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.