
ಪ್ರಜಾವಾಣಿ ವಾರ್ತೆ
ಬೆಳಗಾವಿ: ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ (ಕ್ಲಬ್ ರಸ್ತೆ) ಮಂಗಳವಾರ ಬೈಕ್‌ನಲ್ಲಿ ಬಂದ ಇಬ್ಬರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ (32) ಎಂಬುವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
‘ಬಸವಂತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದ ಬಸವಂತ ಅವರ ಜತೆಗೆ, ಬೈಕ್‌ನಲ್ಲಿ ಬಂದ ಇಬ್ಬರು ಮಾತನಾಡಿದ್ದಾರೆ. ನಂತರ ಎದೆ, ಭುಜ ಮತ್ತಿತರ ಕಡೆ ಚಾಕುವಿನಿಂದ ಇರಿದಿದ್ದಾರೆ. ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ’ ಎಂದು ಕ್ಯಾಂಪ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.