ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹6.65 ಲಕ್ಷ ಹಣವನ್ನು ತಾಲ್ಲೂಕಿನ ಬಾಚಿ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ಸಿಬ್ಬಂದಿ ಸೋಮವಾರ ಮಧ್ಯರಾತ್ರಿ ವಶಪಡಿಸಿಕೊಂಡಿದ್ದಾರೆ.
‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿತ್ತು. ಈ ವೇಳೆ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಅಮೂಲ್ ವಿದ್ಯಾಧರ ಅವರಿಂದ ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.