ADVERTISEMENT

ಬೆಳಗಾವಿ: ಮಹಾರಾಷ್ಟ್ರದ ಜಲಾಶಯಗಳ ಮಾಹಿತಿ ಪಡೆಯಲು ಎಂಜಿನಿಯರ್ ನಿಯೋಜನೆ

ಮುಂಚಿತವಾಗಿ ಪ್ರವಾಹ ಸ್ಥಿತಿ ತಿಳಿಯಲು ಉಪಾಯ

​ಪ್ರಜಾವಾಣಿ ವಾರ್ತೆ
Published 15 ಜುಲೈ 2022, 4:09 IST
Last Updated 15 ಜುಲೈ 2022, 4:09 IST
ರಾಯಬಾಗ ತಾಲ್ಲೂಕಿನ ಹಾರೂಗೇರಿ ಸಮೀಪದ ಕುಡಚಿ-  ಉಗಾರ ಮಾರ್ಗದ ಕೃಷ್ಣಾ ನದಿ ಸೇತುವೆ ಶುಕ್ರವಾರ ಮುಳುಗುವ ಹಂತ  ತಲುಪಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ಮಾರ್ಗವಿದು
ರಾಯಬಾಗ ತಾಲ್ಲೂಕಿನ ಹಾರೂಗೇರಿ ಸಮೀಪದ ಕುಡಚಿ- ಉಗಾರ ಮಾರ್ಗದ ಕೃಷ್ಣಾ ನದಿ ಸೇತುವೆ ಶುಕ್ರವಾರ ಮುಳುಗುವ ಹಂತ ತಲುಪಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ಮಾರ್ಗವಿದು   

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಕೊಯ್ನಾ ಮತ್ತಿತರ ಜಲಾಶಯಗಳಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣ ಹಾಗೂ ನೀರು ಬಿಡುಗಡೆ ಕುರಿತು ನಿರಂತರ ಮಾಹಿತಿ ಒದಗಿಸುವುದಕ್ಕಾಗಿ ಅನುಕೂಲವಾಗುವಂತೆ ನೀರಾವರಿ ಇಲಾಖೆಯ ಎಂಜಿನಿಯರ್ ಒಬ್ಬರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎನ್.ಎಂ.ದಿವಟೆ ಅವರನ್ನು ಮಹಾರಾಷ್ಟ್ರದಲ್ಲಿ ಈ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಈ ಅಧಿಕಾರಿ ಅಲ್ಲಿನ ಕೃಷ್ಣಾ ನದಿಯ ಜಲಾಶಯಗಳಲ್ಲಿ ನೀರು ಸಂಗ್ರಹ ಮಟ್ಟ, ಒಳ ಹರಿವು, ಹೊರ ಹರಿವು ಪ್ರಮಾಣದ ಕುರಿತು ನಿರಂತರವಾಗಿ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿರುವ ಕೃಷ್ಣಾ ನದಿಯ ಜಲಾಶಯಗಳಿಂದ ರಾಜಾಪುರ ಬ್ಯಾರೇಜ್ ವರೆಗಿನ ನೀರಿನ ಹೊರ ಹರಿವು ಕುರಿತು ಪ್ರತಿಕ್ಷಣದ ಮಾಹಿತಿ ಸಿಗಲಿದೆ.

ಪ್ರವಾಹ ಪರಿಸ್ಥಿತಿ ಹೇಗಿದೆ ಎಂಬುದು ರಾಜಾಪುರ ಬ್ಯಾರೇಜಿನಲ್ಲೇ ಗೊತ್ತಾಗಲಿದೆ. ಇದರಿಂದ ಸಂಭವನೀಯ ಹಾನಿ ಅನಾಹುತಗಳಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಸಮಯ ಸಿಗುತ್ತದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.