ADVERTISEMENT

ಬೆಳಗಾವಿ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 8:18 IST
Last Updated 9 ಜುಲೈ 2025, 8:18 IST
   

ಬೆಳಗಾವಿ: ಇಲ್ಲಿನ ಶಹಾಪುರದ ಜೋಷಿ ಮಾಳ ಪ್ರದೇಶದಲ್ಲಿ ಬುಧವಾರ ಒಂದೇ ಕುಟುಂಬದ ಮೂವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೊಬ್ಬ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳಾ ಕುರಡೇಕರ್ (70), ಇವರ ಪುತ್ರ ಸಂತೋಷ ಕುರಡೇಕರ್ (44), ಪುತ್ರಿ ಸುವರ್ಣ ಕುರಡೇಕರ್ (42) ಮೃತಪಟ್ಟವರು. ಇನ್ನೊಬ್ಬ ಪುತ್ರಿ ಸುನಂದಾ ಕುರಡೇಕರ್ (20) ಅವರೂ ವಿಷ ಸೇವಿಸಿದ್ದು ಅವರ ಸ್ಥಿತಿ ‌ಚಿಂತಾಜನಕ‌ವಾಗಿದೆ ಎಂದು ಆಸ್ಪತ್ರೆ ಮೂಲಗಳು‌ ತಿಳಿಸಿವೆ.

ಮೂವರು ಮಕ್ಕಳ‌ ಮದುವೆ ಆಗಿರಲಿಲ್ಲ. ಹೀಗಾಗಿ, ತಾಯಿ‌ ಜತೆಗೇ ಎಲ್ಲರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬುಧವಾರ ಬೆಳಿಗ್ಗೆ ವಿಷ ಸೇವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ADVERTISEMENT

ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳ ಬಳಿ ಮರಾಠಿಯಲ್ಲಿ ಬರೆದ ಡೆತ್ ನೋಟ್ ಕೂಡ ಪತ್ತೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.