ADVERTISEMENT

ಮಹದಾಯಿ ಯೋಜನೆ ಶೀಘ್ರ ಅನುಷ್ಠಾನಗೊಳಿಸಿ: ಕೊಡಿಹಳ್ಳಿ ಚಂದ್ರಶೇಖರ

​ಪ್ರಜಾವಾಣಿ ವಾರ್ತೆ
Published 22 ಜುಲೈ 2023, 6:44 IST
Last Updated 22 ಜುಲೈ 2023, 6:44 IST
ಯರಗಟ್ಟಿ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಶುಕ್ರವಾರ ರೈತ ಹುತಾತ್ಮರ ದಿನಾಚರಣೆಯ ಅಂಗವಾಗಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ ಮಾತನಾಡಿದರು
ಯರಗಟ್ಟಿ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಶುಕ್ರವಾರ ರೈತ ಹುತಾತ್ಮರ ದಿನಾಚರಣೆಯ ಅಂಗವಾಗಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ ಮಾತನಾಡಿದರು   

ಯರಗಟ್ಟಿ: ರೈತ ಹುತಾತ್ಮರ ದಿನಾಚರಣೆ ಅಂಗವಾಗಿ, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿಕರ್ನಾಟಕ ರೈತ ಸಂಘ, ಹಸಿರು ಸೇನೆ, ದಲಿತ ಸ್ವಾಭಿಮಾನ ಸೇನೆ ಹಾಗೂ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ರೈತ ಸಂಘದ ರಾಜ್ಯ ಅದ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ ಮಾತನಾಡಿ ಮಹಾದಾಯಿ ಯೋಜನೆ ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
 
ಹೋಟೆಲ್‌ ಉದ್ಯಮಿ ಜೆ.ರತ್ನಾಕರಶೆಟ್ಟಿ ಮಾತನಾಡಿ, ‘ಯರಗಟ್ಟಿ ತಾಲ್ಲೂಕು ರಚನೆ ಮಾಡಿದರೂ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರ ಪ್ರಾರಂಭಿಸಬೇಕು. ಮತ್ತು ಯರಗಟ್ಟಿ ಸಮಗ್ರ ಅಭಿವೃದ್ದಿಗೆ ಎಲ್ಲರು ಕೈಜೋಡಿಸಬೇಕು’ ಎಂದು ಹೇಳಿದರು.

ಸೋಮು ರೈನಾಪೂರ, ವೆಂಕಣ್ಣ ಹುರಕ್ನವರ ಯೆಕ್ಕರಪ್ಪ ತಳವಾರ, ರಂಗಪ್ಪ ಗಂಗರಡ್ಡಿ ಸತ್ಯಪ್ಪ ಬಾಜನ್ನವರ, ರಾಮಕೃಷ್ಣ ಎಳಮ್ಮಿ, ಮಾರುತಿಕುರಿ, ಭೀಮಶಿ ಗಡಾದಿ, ಶೇಖರ ಕೀಲಾರಿ ಇದ್ದರು,

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.