ADVERTISEMENT

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ: ವಿರೋಧ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 11:04 IST
Last Updated 16 ಜೂನ್ 2020, 11:04 IST
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ರೈತ ವಿರೋಧಿಯಾಗಿದೆ. ಭ್ರಷ್ಟ ಉದ್ಯಮಿಗಳು ಹಾಗೂ ಭೂಮಾಫಿಯಾದವರಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಇದರ ಹಿಂದಿದೆ. ಹೀಗಾಗಿ, ಇಂತಹ ಕ್ರಮಗಳನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು.

‘ಹೋದ ವರ್ಷ ಉಂಟಾದ ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಹಾನಿ ಅನುಭವಿಸಿದ ಸಾವಿರಾರು ಮಂದಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಇದರಿಂದಾಗಿ ಅವರು ತೊಂದರೆಗೆ ಒಳಗಾಗಿದ್ದಾರೆ. ಘೋಷಣೆ ಪ್ರಕಾರ ಬೆಳೆ, ಮನೆ ಹಾಗೂ ಜಾನುವಾರು ಹಾನಿ ಪರಿಹಾರವನ್ನು ಕೂಡಲೇ ನೀಡಬೇಕು. ಕೋವಿಡ್–19 ಲಾಕ್‌ಡೌನ್‌ ಸಂದರ್ಭದಲ್ಲಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ತಕ್ಷಣ ಆರ್ಥಿಕ ನೆರವು ನೀಡಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.ಮುಖಂಡರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರಣ್ಣವರ, ರಾಘವೇಂದ್ರ ನಾಯ್ಕ, ಪ್ರಕಾಶ್ ನಾಯ್ಕ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.