
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಹಿರೇಬಾಗೇವಾಡಿ: ಗ್ರಾಮದ ಅರಳಿಕಟ್ಟಿ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಅಂಕಿ ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣ ಇಸಿದುಕೊಂಡು ಆಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬೆಳಗಾವಿ ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಸಿಸಿಬಿ ವಿಭಾಗದ ಪಿಎಸ್ಐ ಮಂಜುನಾಥ ಭಜಂತ್ರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಗ್ರಾಮದ ಅಡಿವೆಪ್ಪಾ ಚನ್ನಪ್ಪಾ ಘೊಡಗೇರಿ (73) ಎಂಬುವವನಿಂದ ₹5250 ನಗದು, ಓ.ಸಿ ಸಂಖ್ಯೆ ಚೀಟಿಗಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.