ಬೆಳಗಾವಿ: ಖಾನಾಪುರ ತಾಲ್ಲೂಕಿನ ಮಾಚಿಗಡ ಗ್ರಾಮದ ಹೊರವಲಯದಲ್ಲಿ ಜಿಲೆಟಿನ್ ಬಾಂಬ್ ಸ್ಫೋಟವಾಗಿ, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾಡುಪ್ರಾಣಿಗಳಿಂದ ಬೆಳೆಗಳ ರಕ್ಷಣೆಗಾಗಿ ಬಾಂಬ್ ಇಡಲಾಗಿತ್ತು ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ವ್ಯಕ್ತಿಯ ದೇಹ ಮೂರು ಭಾಗಗಳಾಗಿದೆ ಎಂದು ಗೊತ್ತಾಗಿದೆ.
ಸ್ಫೋಟದ ಸಂದರ್ಭದಲ್ಲಿ ಸಮೀಪದಲ್ಲೇ ಇದ್ದ ಟ್ರಾಕ್ಟರ್ ಕೂಡ ಜಖಂ ಆಗಿದೆ. ಘಟನಾ ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿದ್ದಾರೆ. ಮೃತರ ವಿವರ ತಿಳಿದುಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.