ADVERTISEMENT

ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ: ಚಿಕ್ಕೋಡಿ, ನಿಪ್ಪಾಣಿಯ 4 ಬ್ಯಾರೇಜ್ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 11:41 IST
Last Updated 17 ಜೂನ್ 2020, 11:41 IST
   

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಉಪನದಿಗಳ ನೀರಿನ ಒಳಹರಿವಿನಲ್ಲಿ ಹೆಚ್ಚಳ ಉಂಟಾಗಿದೆ. ಚಿಕ್ಕೋಡಿ ತಾಲ್ಲೂಕಿನ ಒಂದು, ನಿಪ್ಪಾಣಿ ತಾಲ್ಲೂಕಿನ 3 ಬ್ಯಾರೇಜ್‌ಗಳು ಮುಳುಗಡೆಯಾಗಿವೆ.

ಕೃಷ್ಣಾ ನದಿಗೆ 15 ಸಾವಿರ ಕ್ಯುಸೆಕ್ ಮತ್ತು ದೂಧಗಂಗಾ ಮತ್ತು ವೇದಗಂಗಾ ನದಿಗೆ ಒಟ್ಟು 11 ಸಾವಿರ ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ‌ ಕೃಷ್ಣಾ ನದಿಗೆ 26 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಪರಿಣಾಮವಾಗಿ ದೂಧಗಂಗಾ ನದಿಗೆ ಅಡ್ಡಲಾಗಿರುವ ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ- ದತ್ತವಾಡ ಮತ್ತು
ನಿಪ್ಪಾಣಿ ತಾಲ್ಲೂಕಿನ ಕಾರದಗಾ- ಭೋಜ ಗ್ರಾಮಗಳ ಮಧ್ಯೆದ ಬ್ಯಾರೇಜ್ ಮುಳುಗಡೆಯಾಗಿದೆ.

ADVERTISEMENT

ವೇದಗಂಗಾ ನದಿಗೆ ಅಡ್ಡಲಾಗಿರುವ ಬೋಜವಾಡಿ-ಕುನ್ನೂರ, ಅಕ್ಕೋಳ- ಸಿದ್ನಾಳ ಬ್ಯಾರೇಜ್ ಸಹ ಮುಳುಗಡೆಯಾಗಿವೆ.

ಈ ಗ್ರಾಮಗಳಿಗೆ ಪರ್ಯಾಯ ರಸ್ತೆಗಳಿದ್ದು, ಜನರು ಈ ಮಾರ್ಗಗಳನ್ನು ಬಳಸುತ್ತಿದ್ದಾರೆ.

ಬೆಳಗಾವಿಯಲ್ಲೂ ಮಳೆ: ಬೆಳಗಾವಿ, ಖಾನಾಪುರ, ನಿಪ್ಪಾಣಿ, ಹಾರೂಗೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.