ADVERTISEMENT

ಬೆಳಗಾವಿ | ಧಾರಾಕಾರ ಮಳೆ: ಜನರ ಪರದಾಟ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 2:42 IST
Last Updated 16 ಅಕ್ಟೋಬರ್ 2025, 2:42 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಗುಡುಗು, ಮಿಂಚು ಸಹಿತವಾಗಿ ಧಾರಾಕಾರ ಮಳೆಯಾಗಿದ್ದರಿಂದ ವಾತಾವರಣ ತಂಪೇರಿತು. 

ದೀಪಾವಳಿ ಹಬ್ಬದ ಖರೀದಿಗಾಗಿ ಇಲ್ಲಿನ ಮಾರುಕಟ್ಟೆ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ, ಸಂಜೆ ಒಂದು ತಾಸಿಗೂ ಹೆಚ್ಚು ಸಮಯ ಮಳೆ ಸುರಿದ ಕಾರಣ ಪರದಾಡಿದರು. ಬೀದಿಬದಿ ವ್ಯಾಪಾರಿಗಳು, ತರಕಾರಿ ಮಾರುವವರಿಗೂ ತೊಂದರೆಯಾಯಿತು.

ADVERTISEMENT

ವಿವಿಧ ಮಾರ್ಗಗಳ ಮುಖ್ಯರಸ್ತೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರ ಸಂಚಾರಕ್ಕೆ ಸಮಸ್ಯೆಯಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.