ADVERTISEMENT

ಬೆಳಗಾವಿ: ಬಿಜೆಪಿ ಶಾಸಕ ಅನಿಲ ಬೆನಕೆ ಕಚೇರಿ ಮೇಲೆ ಕಲ್ಲುತೂರಾಟ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2022, 4:48 IST
Last Updated 14 ಫೆಬ್ರುವರಿ 2022, 4:48 IST
ಬಿಜೆಪಿ ಶಾಸಕ ಅನಿಲ ಬೆನಕೆ ಕಚೇರಿ
ಬಿಜೆಪಿ ಶಾಸಕ ಅನಿಲ ಬೆನಕೆ ಕಚೇರಿ   

ಬೆಳಗಾವಿ: ಇಲ್ಲಿನ ಚವಾಟ ಗಲ್ಲಿಯಲ್ಲಿರುವ ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಅವರ ಕಚೇರಿ ಮೇಲೆ ಸೋಮವಾರ ನಸುಕಿನಲ್ಲಿ ಕಲ್ಲುತೂರಾಟ ನಡೆದಿದೆ.

ಕಿಟಕಿಗಳ ಗಾಜುಗಳು ಪುಡಿ ಪುಡಿಯಾಗಿವೆ. ಇದರಿಂದ ‌ಆ ಗಲ್ಲಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಪಾನಮತ್ತನಾಗಿದ್ದ ವ್ಯಕ್ತಿಯೊಬ್ಬ ಕಲ್ಲೆಸೆದಿದ್ದಾನೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT