ADVERTISEMENT

ಗ್ರಾ.ಪಂ. ಚುನಾವಣೆಯಲ್ಲಿ ನನ್ನ ಬಣಕ್ಕೆ ಭರ್ಜರಿ ಗೆಲುವು: ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2020, 14:45 IST
Last Updated 30 ಡಿಸೆಂಬರ್ 2020, 14:45 IST
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದವರನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬುಧವಾರ ಸತ್ಕರಿಸಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದವರನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬುಧವಾರ ಸತ್ಕರಿಸಿದರು   

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬೆಂಬಲಿಗರು ಭರ್ಜರಿ ಜಯಭೇರಿ ಭಾರಿಸಿದ್ದಾರೆ.

‘ಕ್ಷೇತ್ರದ ವ್ಯಾಪ್ತಿಯಲ್ಲಿ 44 ಗ್ರಾಮ ಪಂಚಾಯಿತಿಗಳಿದ್ದು, ಈವರೆಗೆ ಪ್ರಕಟವಾಗಿರುವ ಫಲಿತಾಂಶಗಳ ಪೈಕಿ ಶೇ.75ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ನನ್ನ ಬೆಂಬಲಿಗರು ಜಯ ಗಳಿಸಿದ್ದಾರೆ. ಬಡಾಲ ಅಂಕಲಗಿಯ 13 ಸದಸ್ಯರ ಪೈಕಿ 11 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಕುದ್ರಮನಿಯಲ್ಲಿ 10 ಸ್ಥಾನಗಳು ನನ್ನ ಬಣಕ್ಕೆ ಬಂದಿದೆ. ಹಿರೇಬಾಗೇವಾಡಿಯ 32 ಸ್ಥಾನಗಳ ಪೈಕಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಮ್ಮವರು ಜಯಿಸಿದ್ದಾರೆ. ಕಂಗ್ರಾಳಿ ಬಿ.ಕೆ. ಬಹು ವರ್ಷಗಳ ನಂತರ ಕಾಂಗ್ರೆಸ್ ಬೆಂಬಲಿತರ ತೆಕ್ಕೆಗೆ ಬಂದಿದೆ. ಹಿಂಡಲಗಾ, ತುರಮರಿ, ಕಮಕಾರಟ್ಟಿಯಲ್ಲೂ ನಮಗೆ ಒಳ್ಳೆಯ ಫಲಿತಾಂಶ ಸಿಕ್ಕಿದೆ’ ಎಂದು ಹೇಳಿಕೆ ನೀಡಿದ್ದಾರೆ.

‘ಮತದಾರರು ಅಭಿವೃದ್ಧಿಗೆ ಮತ ನೀಡಿರುವುದಕ್ಕೆ ಹಾಗೂ ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸದಾ ಋಣಿಯಾಗಿರುತ್ತೇನೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.