ADVERTISEMENT

ಬೆಳಗಾವಿ: ಪ್ರತಿಮೆ ಹಾನಿ ಮಾಡಿದವರ ವಿರುದ್ಧ ಕ್ರಮಕ್ಕೆ ಸಾಮರಸ್ಯ ವೇದಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 8:38 IST
Last Updated 18 ಡಿಸೆಂಬರ್ 2021, 8:38 IST
ಸಾಮಾಜಿಕ ಸಾಮರಸ್ಯ ವೇದಿಕೆ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ಶನಿವಾರ ಮನವಿ ಸಲ್ಲಿಸಿದರು.
ಸಾಮಾಜಿಕ ಸಾಮರಸ್ಯ ವೇದಿಕೆ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ಶನಿವಾರ ಮನವಿ ಸಲ್ಲಿಸಿದರು.    

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಛತ್ರಪತಿ ಶಿವಾಜಿ ಮಹಾರಾಜರಿಗೆ ಅಪಮಾನ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ಗಲಾಟೆ- ಗದ್ದಲಗಳಿಂದ ಹೊರಬಂದು ಎಲ್ಲರೂ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಸಾಮರಸ್ಯ ವೇದಿಕೆ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ಶನಿವಾರ ಮನವಿ ಸಲ್ಲಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವೇಳೆ ಕಾನೂನು ಕೈಗೆತ್ತಿಕೊಂಡು ಯಾರೂ ಶಾಂತಿ ಕದಡಬಾರದು. ಎಲ್ಲ ನಾಯಕರನ್ನೂ ಗೌರವಿಸಿ ಸಮಾಜದಲ್ಲಿ ಸಾಮರಸ್ಯದಿಂದ ಬಾಳಬೇಕು ಎಂದು‌ ಕೋರಿದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಚಿತ್ ಪ್ರಕಾಶಾನಂದ ಸ್ವಾಮೀಜಿ, ಮುಖಂಡರಾದ ಕೃಷ್ಣಭಟ್, ರಾಜೇಂದ್ರ ಜೈನ, ಲಕ್ಷ್ಮಣ ಪವಾರ, ಶ್ರೀಕಾಂತ ಕಾಂಬಳೆ, ಸಂತೋಷ ನಾಗರಮುನ್ನೋಳಿ ಮೊದಲಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.