ADVERTISEMENT

ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್ ಡೌನ್ ಗೆ ಉತ್ತಮ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 10:38 IST
Last Updated 5 ಜುಲೈ 2020, 10:38 IST
ಬೆಳಗಾವಿಯಲ್ಲಿ ಲಾಕ್‌ಡೌನ್ ಸಮಯದಲ್ಲಿ ರಸ್ತೆಗಳು ಖಾಲಿ ಖಾಲಿಯಾಗಿದ್ದವು
ಬೆಳಗಾವಿಯಲ್ಲಿ ಲಾಕ್‌ಡೌನ್ ಸಮಯದಲ್ಲಿ ರಸ್ತೆಗಳು ಖಾಲಿ ಖಾಲಿಯಾಗಿದ್ದವು   

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಗಾಗ ಬೀಳುತ್ತಿರುವ ಮಳೆ ಕೂಡ ಜನರು ಹೊರಗಡೆ ಓಡಾಡದಂತೆ ತಡೆ ಒಡ್ಡುತ್ತಿತ್ತು.

ಸಾರಿಗೆ ಬಸ್, ಆಟೊರಿಕ್ಷಾಗಳು ರಸ್ತೆಗಿಳಿಯಲಿಲ್ಲ. ನಗರ ಹಾಗೂ ಕೇಂದ್ರ ಸಾರಿಗೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ರಸ್ತೆಗಳಲ್ಲೂ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ತುರ್ತು ಕೆಲಸಗಳಿಗೆ ಹೋಗುವವರಿಗೆ ಮಾತ್ರ ಪೊಲೀಸರು ಅವಕಾಶ ಕೊಡುತ್ತಿದ್ದಾರೆ.

ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಕೋವಿಡ್-19 ಹರಡದಂತೆ ನೋಡಿಕೊಳ್ಳಲು ಜಾರಿಗೊಳಿಸಿರುವ ಲಾಕ್ ಡೌನ್ ಸಾರ್ವಜನಿಕರಿಂದ ಉತ್ಮ ಸ್ಪಂದನೆ ದೊರೆತಿರುವುದರಿಂದ ವಾರಾಂತ್ಯದ ಚಟುವಟಿಕೆಗಳು ಮಂಕಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.